ಮತ್ತೇ ಭಾರತದ ನೆಲದಲ್ಲಿ ಕ್ಯಾತೆ ತೆಗೆದ ಪಾಕ್.!ಪಾಕಿಸ್ಥಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಭಾರತ.?ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಪಾಕಿಸ್ತಾನದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಚುನಾವಣೆ ನಡೆಸಲು ಪಾಕಿಸ್ತಾನ ಸುಪ್ರೀಂಕೋರ್ಟ್ ಕಳೆದವಾರ ಅಲ್ಲಿನ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಈ ಕುರಿತು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಪ್ರದೇಶಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅದರ ಸಂಪೂರ್ಣ ಕಾನೂನು ನೀತಿ ಎಲ್ಲವೂ ಭಾರತಕ್ಕೆ ಸೇರಿದ್ದಾಗಿದೆ . ಇದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಖಡಕ್ ಎಚ್ಚರಿಕೆ ನೀಡಿದೆ .

ಪಾಕಿಸ್ತಾನವು ಭಾರತೀಯ ನೆಲದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆಉತ್ತೇಜನೆ ನೀಡುವ ತನ್ನ ಕೆಟ್ಟ ಚಾಳಿಯನ್ನು ಇನ್ನೂ ಬಿಟ್ಟಿಲ್ಲ . ಭಾನುವಾರ , ಹಂಡ್ವಾರಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ . ಈ ವೇಳೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ . ಇಬ್ಬರು ಭಯೋತ್ಪಾದಕರಲ್ಲಿ ಒಬ್ಬನನ್ನು ಪಾಕಿಸ್ತಾನದ ಭಯೋತ್ಪಾದಕ ಮತ್ತು ಲಷ್ಕರ್ - ಎ - ತೈಬಾ ನಾಯಕ ಹೈದರ್ ಎಂದು ಗುರುತಿಸಲಾಗಿದೆ .

Comments