ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಮಜನ್ಮಭೂಮಿ ನಿರ್ಮಾಣ ಕಾರ್ಯಕ್ಕೆ ಪುನಃ ಚಾಲನೆ ಸಿಕ್ಕಿದೆ. ದೇವಾಲಯದ ಜಾಗವನ್ನು ತೆರವುಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಇಷ್ಟು ದಿನಗಳವರೆಗೆ ಲಾಕ್ಡೌನ್ ಇದ್ದ ಕಾರಣದಿಂದ ನಿರ್ಮಾಣ ಕಾರ್ಯವನ್ನು ನಿಲ್ಲಿಸಲಾಗಿತ್ತು. ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಿರ್ಮಾಣಕ್ಕೆ ಹಸಿರುನಿಶಾನೆ ತೋರಿದ ಹಿನ್ನೆಲೆಯಲ್ಲಿ ಕಾರ್ಯ ಪುನರಾರಂಭಿಸಲಾಗಿದೆ. ಅಮೆರಿಕದ ಶ್ವೇತಭವನದಲ್ಲಿ ಮೊಳಗಿತು ವೇದ ಮಂತ್ರ ಘೋಷ- ಪುರೋಹಿತರ ಆಹ್ವಾನಿಸಿದ ಟ್ರಂಪ್
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ದೇವಾಲಯದ ಸುತ್ತಲೂ ನಿರ್ಮಿಸಲಾದ ಲೋಹದ ಬ್ಯಾರಿಕೇಡ್ಗಳನ್ನು ಮತ್ತು ಸ್ಥಳದಲ್ಲಿ ಇದ್ದ ಸಿಆರ್ಪಿಎಫ್ ಶಿಬಿರಗಳನ್ನು ನಿನ್ನೆ (ಗುರುವಾರ) ತೆರವುಗೊಳಿಸಲಾಗಿದೆ. ಇದರ ಜತೆಗೆ, ಭೂಮಿಯನ್ನು ಸಮತಟ್ಟುಗೊಳಿಸಲು ಕಾರ್ಯ ನಡೆದಿದೆ.
ಲಾರ್ಸೆನ್ ಮತ್ತು ಟೌಬ್ರೊ ಕಂಪನಿಯ ಇಂಜಿನಿಯರ್ಗಳ ಜತೆಗೂಡಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ತಂಡ ಈ ಕೆಲಸದ ಮೇಲ್ವಿಚಾರಣೆ ನಡೆಸುತ್ತಿದೆ. ದೇವಾಲಯದ ಸಂಪೂರ್ಣ ನಿರ್ಮಾಣದ ಉಸ್ತುವಾರಿಯನ್ನು ಇವರು ವಹಿಸಲಿದ್ದಾರೆ. ಕಂಪನಿಯ ಇಂಜಿನಿಯರ್ಗಳು ಯಾವುದೇ ಲಾಭ ಅಥವಾ ನಷ್ಟವಿಲ್ಲದೇ ಇದರ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ವಿಶೇಷ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಹಂತ ಹಂತವಾಗಿ ಕಾಮಗಾರಿಯನ್ನು ನಡೆಸಲಾಗುತ್ತದೆ ಎಂದಿದ್ದಾರೆ ಶ್ರೀರಾಮ್ ತೀರ್ಥ ಕ್ಷೇತ್ರ ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್. 'ಭಗವಾನ್ ರಾಮನ ವಿಗ್ರಹವನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಲಾಕ್ಡೌನ್ ನಿಮಿತ್ತ ಹಾಕಲಾಗಿದ್ದ ಬ್ಯಾರಿಕೇಡ್ಗಳನ್ನು ತೆಗೆದುಹಾಕಿ ನೆಲವನ್ನು ಸಮತಟ್ಟು ಮಾಡುವ ಕಾರ್ಯ ಕೈಗೊಂಡಿದ್ದೇವೆ.
ಇಲ್ಲಿಯ ಮಣ್ಣಿನ ಬಗ್ಗೆ ತಿಳಿದುಕೊಳ್ಳಲು ಅದರ ಪರೀಕ್ಷೆ ಸಹ ಮಾಡಲಾಗುವುದು. ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಗಳನ್ನು ನಡೆಸಿ ಕೆಲಸದ ಪ್ರಗತಿಯ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ರಾಮ್ ಕುಚ್ಚೇರಿ ದೇವಸ್ಥಾನದಲ್ಲಿರುವ ಟ್ರಸ್ಟ್ನ ಕಚೇರಿ ಕೂಡ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಲಾಕ್ಡೌನ್ ಸಂಪೂರ್ಣ ಮುಗಿದ ಮೇಲೆ ಟ್ರಸ್ಟ್ ಅಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂಬ ಮಾಹಿತಿ ನೀಡಿದ್ದಾರೆ ಚಂಪತ್ ರಾಯ್.
Comments
Post a Comment