ಮೊತ್ತೊಮ್ಮೆ ತನ್ನ ವಿರೋಧಿಗಳ ವಿರುದ್ಧ ಗುಡುಗಿ ಎಚ್ಚರಿಕೆ ಕೊಟ್ಟ ಅಮಿತ್ ಷಾ!

ನನಗೆ ಏನೂ ಆಗಿಲ್ಲ. ನಾನು ಚೆನ್ನಾಗಿದ್ದು, ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಅಮಿತ್ ಶಾ ಅವರಿಗೆ ಆರೋಗ್ಯ ಹಾಳಾಗಿದೆ. ಹೀಗಾಗಿ ಅವರು ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾದ ಬೆನ್ನಲ್ಲೇ ಅಮಿತ್ ಶಾ ಟ್ವಿಟ್ಟರ್ ನಲ್ಲಿ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ದೇಶ ಈಗ ಮಾರಣಾಂತಿಕ ಕಾಯಿಲೆಯಾದ ಕೊರೊನಾ ವಿರುದ್ಧ ಹೋರಾಡುತ್ತಿದ್ದು, ನಾನು ಗೃಹ ಸಚಿವನಾಗಿ ಮಾಡಬೇಕಾದ ಕೆಲಸಗಳನ್ನು ಮಾಡುತ್ತಿದ್ದೇನೆ. ಈ ವಿಚಾರ ನನ್ನ ಗಮನಕ್ಕೆ ಬಂದರೂ ನಾನು ತಲೆ ಕೆಡಿಸಿಕೊಳ್ಳದ ಕಾರಣ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಮತ್ತು ನನ್ನ ಹಿತೈಷಿಗಳು ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹೀಗಾಗಿ ನಾನೇ ಈಗ ಸ್ಪಷ್ಟನೆ ನೀಡುತ್ತಿದ್ದು, ನಾನು ಆರೋಗ್ಯವಾಗಿದ್ದು, ನನಗೆ ಯಾವುದೇ ಕಾಯಿಲೆ ಇಲ್ಲ ಎಂದು ಹೇಳಿದ್ದಾರೆ.

ನನ್ನ ವಿರುದ್ಧವಾಗಿ ಯಾರೆಲ್ಲ ವದಂತಿ ಹಬ್ಬಿಸಿದ್ದಾರೋ ಅದರಿಂದಾಗಿ ನನ್ನ ಆರೋಗ್ಯ ಹೆಚ್ಚಾಗುತ್ತದೆ ಎಂದು ನಂಬಿದ್ದೇನೆ. ಅರ್ಥವಿಲ್ಲದ ಆಲೋಚನೆಯನ್ನು ಬಿಟ್ಟು ಬಿಡಿ. ನಾನು ನನ್ನ ಕೆಲಸ ಮಾಡುತ್ತೇನೆ. ನೀವು ನಿಮ್ಮ ಕೆಲಸ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

Comments