Featured Post

ಇದೀಗ ಬಂದ ಸುದ್ದಿ: ರಾಜ್ಯದಲ್ಲಿ ಮಹತ್ವದ ಹುದ್ದೆಗೆ ಆಯ್ಕೆಯಾಗಲಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ.?

ರಾಜ್ಯಸಭಾ ಚುನಾವಣೆಯಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜ್ಯ ಬಿಜೆಪಿ ನಾಯಕರನ್ನು ತಬ್ಬಿಬ್ಬು ಮಾಡಿದ್ದ ಹೈಕಮಾಂಡ್, ವಿಧಾನಪರಿಷತ್ ಚುನಾವಣೆ ವೇಳೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ನಾಯಕರಿಗೆ ಜವಾಬ್ದಾರಿ ನೀಡಿತ್ತು.

ಹೀಗಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ತಾವು ಈ ಹಿಂದೆ ನೀಡಿದ್ದ ಭರವಸೆಯಂತೆ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.
ಇದೀಗ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಬೇಕಾಗಿದ್ದು, ಬಿಜೆಪಿ ಹೈಕಮಾಂಡ್ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮತ್ತು ರಾಜಕೀಯದಿಂದ ದೂರವಿರುವ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

ಹೀಗಾಗಿ ಎಸ್.ಎಲ್. ಭೈರಪ್ಪ, ಗುರುರಾಜ ಕರಜಗಿ, ಚಕ್ರವರ್ತಿ ಸೂಲಿಬೆಲೆ, ಗೀತಕ್ಕ, ರಹೀಂ ಉಚ್ಚಿಲ ಹಾಗೂ ಅನ್ವರ್ ಮಾಣಿಪ್ಪಾಡಿ ಅವರ ಹೆಸರುಗಳು ಚರ್ಚೆಯಲ್ಲಿದ್ದು, ಈ ಪೈಕಿ ಐವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.