ಇದೀಗ ಬಂದ ಸುದ್ದಿ: ಸಿಎಂ ಯಡಿಯೂರಪ್ಪರಿಗೆ ಭೀಮ ಬಲ, ಹೈಕಮಾಂಡ್ ನಿಂದ ರಾಜಾಹುಲಿಗೆ ಮಹತ್ವದ ಹೊಣೆ

ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ ಈ ಬಾರೀ ಹೈಕಮಾಂಡ್ ನಿರ್ಣಯ ತೆಗೆದುಕೊಂಡಿದ್ದು, ಇದರಿಂದ ಬಿಜೆಪಿ ರಾಜ್ಯ ಘಟಕಕ್ಕೆ ಭಾರೀ ಭಾರೀ ಮುಜುಗರ ಉಂಟಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ನಾಯಕರ ಮಾತಿಗೆ ಹೈಕಮಾಂಡ್ ಬೆಲೆ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿ ಬಂದಿತ್ತು. ಆದರೀಗ ಇವೆಲ್ಲದರ ಬೆನ್ನಲ್ಲೇ ರಾಜಾಹುಲಿಗೆ ಹೈಕಮಾಂಡ್ ಮಹತ್ತರ ಹೊಣೆ ವಹಿಸಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವವಣೆ ಇಲ್ಲ ಎನ್ನುವ ಮೂಲಕ ಭೀಮ ಬಲ ತುಂಬಿದೆ.

ಹೌದು 77 ರ ವಯಸ್ಸಿನಲ್ಲೂ ಕರ್ನಾಟಕದಲ್ಲಿ ಯಡಿಯೂರಪ್ಪ ಕೊರೋನಾ ವೈರಸ್  ನಿಯಂತ್ರಣ ಮಾಡಿದ ರೀತಿಗೆ ಹೈಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್ ವೈ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ದೆಹಲಿ ಮೂಲಗಳು ತಿಳಿಸಿವೆ. ಹೀಗಿದ್ದರೂ ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಡಿಯೂರಪ್ಪ ನಾಯಕತ್ವದ ವಿಚಾರ ಚರ್ಚೆಗೆ ಬಂದಿತ್ತು. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಬೇಕು ಅನ್ನುವ ಉದ್ದೇಶದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಬಿಎಸ್ ವೈ ನಾಯಕತ್ವಕ್ಕೂ ಮತ್ತು ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆಗೂ ಸಂಬಂಧ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದೆ. ಅಲ್ಲದೇ ವಿಧಾನಪರಿಷತ್ ಸದಸ್ಯರ ಆಯ್ಕೆ ಹೊಣೆ ಬಿಎಸ್ ವೈ ಗೆ ವಹಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳ ಮಾಹಿತಿ.

Comments