Featured Post

ಮೆಗಾ ಬ್ರೇಕಿಂಗ್: ಕರಾವಳಿಯ ಪ್ರಭಾವಿ ಬಿಜೆಪಿ ನಾಯಕನಿಗೆ ಮಹತ್ವದ ಹುದ್ದೆ ನೀಡಿದ ರಾಜ್ಯ ಬಿಜೆಪಿ

ಬಿಜೆಪಿಯ ದ.ಕ. ಜಿಲ್ಲಾ ಉಪಾಧ್ಯಕ್ಷ, ಬಿಲ್ಲವ ಸಮಾಜ ಮುಖಂಡ ಕೆ. ಹರಿಕೃಷ್ಣ ಬಂಟ್ವಾಳ ಅವರು ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ.

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ರಾಮಪ್ಪ ತಳವಾರ ಅವರು ಸರ್ಕಾರದ ಪರವಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನ್ 12ರಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸುದೀರ್ಘ ರಾಜಕೀಯ ಪಯಣ ನಡೆಸಿರುವ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಕಳೆದ ಚುನಾವಣೆ ವೇಳೆ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಕ್ಷೇತ್ರದಲ್ಲಿ ವಿಜಯಿಯಾಗುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

 ಬಳಿಕ ಬಿಜೆಪಿಯಲ್ಲಿ ಜಿಲ್ಲಾ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ ಬಂಟ್ವಾಳ್, ಪ್ರಖರ ಭಾಷಣಗಳಿಗೆ ಹೆಸರುವಾಸಿ. ಬಿಲ್ಲವ ಸಮಾಜ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬಂಟ್ವಾಳ್ ಅವರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕೊಡಮಾಡುವ ನಿಗಮ ಹುದ್ದೆ ದೊರಕಿದೆ.