ಭಾರತದಲ್ಲಿ ಬ್ಯಾನ್ ಆದ ಬಳಿಕ ಟಿಕ್ ಟಾಕ್ ಗೆ ಎದುರಾಯ್ತು ಬಾರೀ ದೊಡ್ಡ ಶಾಕ್! ಕಥೆ ಫಿನಿಶ್!


ನವದೆಹಲಿ : ಕೇಂದ್ರ ಸರ್ಕಾರದ ಬಳಿಕ ಚೀನಾ ಕಂಪನಿಗಳಿಗೆ ಭಾರತದ ವಕೀಲರಿಂದ ಬಿಗ್ ಶಾಕ್ ಎದುರಾಗಿದೆ. ಟಿಕ್ ಟಾಕ್ ಪರ ವಾದ ಮಂಡಿಸಲು‌ ಭಾರತದ ಪ್ರಮುಖ ವಕೀಲರು ನಿರಾಕರಿಸಿದ್ದಾರೆ‌. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಭದ್ರತೆ ಕಾರಣ ನೀಡಿ ಟಿಕ್ ಟಾಕ್ ಸೇರಿ ಭಾರತದಲ್ಲಿ 59 ಚೀನಾ ನಿರ್ಮಿತ ಮೊಬೈಲ್ ಆ್ಯಪ್ ಗಳನ್ನು ನಿರ್ಬಂಧಿಸಿರುವುದನ್ನು  ಟಿಕ್ ಟಾಕ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಮುಂದಾಗಿದೆ. ಈ ಕಾರಣಕ್ಕೆ ಸುಪ್ರೀಂಕೋರ್ಟ್‌ನಲ್ಲಿ ತನ್ನ ಪರ ವಾದ ಮಂಡಿಸಲು ಭಾರತದ ಪ್ರಖ್ಯಾತ ವಕೀರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿದೆ.

ಈ ಪೈಕಿ ಕೇಂದ್ರ ಸರ್ಕಾರದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಅವರನ್ನ ಭೇಟಿ ಮಾಡಿ ಟಿಕ್ ಟಾಕ್ ಪ್ರತಿನಿಧಿಸಲು ಮನವಿ ಮಾಡಿದ್ದು ರೊಹ್ಟಗಿ ಮನವಿ ತಿರಸ್ಕರಿಸಿದ್ದಾರೆ. ಸರ್ಕಾರ ತೆಗೆದುಕೊಂಡ ನಿರ್ಧಾರದ ವಿರುದ್ಧವಾಗಿ ಯಾವುದೇ ಚೀನಾ ಕಂಪನಿಗಳ ಪರ ವಾದ ಮಂಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುವ ಪ್ಲ್ಯಾನ್ ಗೆ ಹಿನ್ನಡೆಯಾಗಿದೆ.

ಮಂಗಳವಾರ ಟಿಕ್ ಟಾಕ್ ಬಗ್ಗೆ ನಿರ್ಬಂಧ ಬಗ್ಗೆ ಸ್ಪಷ್ಟನೆ ನೀಡಿದ್ದ ಸಂಸ್ಥೆ, ಭಾರತದ ಕಾನೂನುಗಳ ವ್ಯಾಪ್ತಿಗೆ ಒಳಪಟ್ಟು ಕಾರ್ಯನಿರ್ವಹಿಸುತ್ತಿದ್ದೇವೆ ಬಳಕೆದಾರರು ಯಾವ ಮಾಹಿತಿಯನ್ನು ಚೀನಾ ಸೇರಿದಂತೆ ಇತರೆ ದೇಶಗಳೊಂದಿಗೆ ಹಂಚಿಕೊಂಡಿಲ್ಲ‌. ಭಾರತದ ಸಮಗ್ರತೆ ಧಕ್ಕೆ ತರುವ ಕೆಲಸ ಸಂಸ್ಥೆ ಮಾಡುವುದಿಲ್ಲ ಎಂದಿತ್ತು. ಬಗ್ಗೆ ಕೇಂದ್ರ ಸರ್ಕಾರಕ್ಕೂ ಮನವರಿಕೆ ಮಾಡುವ ಪ್ರಯತ್ನ ಮಾಡುವುದಾಗಿ ಟಿಕ್ ಟಾಕ್ ಹೇಳಿತ್ತು.

Comments