ಬಿಗ್ ನ್ಯೂಸ್: ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ಅತ್ಮಹತ್ಯೆಗೆ ಬಿಗ್ ಟ್ವಿಸ್ಟ್

ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಬಾಲಿವುಡ್ ಚಿತ್ರರಂಗದ ಇಬ್ಬರಿಗೆ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ಇದುವರೆಗೆ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 37 ಜನರ ಹೇಳಿಕೆ ಪಡೆದುಕೊಂಡಿರುವ ಮುಂಬೈ ಪೊಲೀಸರು ಬಾಲಿವುಡ್ ನಿರ್ದೇಶಕ ಮಹೇಶ್ ಭಟ್, ಮತ್ತೊಬ್ಬ ನಿರ್ದೇಶಕ ಕರಣ್ ಜೋಹರ್ ಅವರ ಮ್ಯಾನೇಜರ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕರಣ್ ಜೋಹರ್ ಅವರಿಗೂ ಸಮನ್ಸ್ ನೀಡಬಹುದು ಎಂದು ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ಬಾಲಿವುಡ್ ಚಿತ್ರರಂಗದಲ್ಲಿ ಅವಕಾಶ ಪಡೆಯಲು ಕೆಲವರ ಕೃಪೆ ಬೇಕಿದೆ. ತಮ್ಮ ಹಿಡಿತದಲ್ಲಿ ಚಿತ್ರರಂಗ ಇಟ್ಟುಕೊಂಡಿರುವ ಅನೇಕರು ಅವಕಾಶ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದ ಖ್ಯಾತ ನಟಿ ಕಂಗನಾ ರಣಾವತ್, ಮಹೇಶ್ ಭಟ್ ಮತ್ತು ಕರಣ್ ಜೋಹರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಇದಾದ ನಂತರದಲ್ಲಿ ಸಮನ್ಸ್ ನೀಡಿರುವುದು ಕುತೂಹಲ ಕೆರಳಿಸಿದೆ.