ವೀಡಿಯೋ ನೋಡಿ : ರೈಲಿನಡಿ ಸಿಲುಕಿದ ವ್ಯಕ್ತಿಯನ್ನು ದೇವರಂತೆ ಬಂದು ರಕ್ಷಿಸಿದ ಯೋಧ!

ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಮುಂಬೈ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ 52 ವರ್ಷದ ದಿಲೀಪ್ ಮಂಡಗೆ ಎಂಬವರು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದ್ದರು. ಈ ವೇಳೆ ಆಯತಪ್ಪಿದ ದಿಲೀಪ್ ಅವರನ್ನು ಪ್ಲಾಟ್‍ಫಾರಂನಲ್ಲಿ ಕರ್ತವ್ಯನಿರತ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.