ದಿಢೀರ್ ಸಮಸ್ಯೆ ; ಕೊರೋನಾಗೆ IAS ಅಧಿಕಾರಿ ಬಲಿ!

ಕೋಲ್ಕತ್ತಾ: ಕೋವಿಡ್‌ 19ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಐಎಎಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.

ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಸೋಮವಾರ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದರು.

ಭಾನುವಾರ ಉಸಿರಾಟದ ಸಮಸ್ಯೆ ದಿಢೀರ್‌ ಉಲ್ಬಣವಾಗಿದ್ದರಿಂದ ಅವರನ್ನು ಸೆರಾಂಪೋರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.