Posted by
Media9
on
- Get link
- Other Apps
ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಬಿಜೆಪಿಯ ಅಶೋಕ್ ಗಸ್ತಿ (55) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಸೆ. 2 ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಣಿಪಾಳ್ ಅಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಅಶೋಕ್ ಗಸ್ತಿ ಅವರು ಮೂಲತಃ ರಾಯಚೂರಿನ ಲಿಂಗಸೂಗರಿನವರು. ಜುಲೈ 22 ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.