ನಾನು ಯಡಿಯೂರಪ್ಪ ಸರ್ಕಾರದಲ್ಲಿ ಸಚಿವನಾಗುವುದು ಖಚಿತ ಎಂದ ಪ್ರಭಾವಿ ಶಾಸಕ

ಸಿಎಂ ಯಡಿಯೂರಪ್ಪ ಅವರ ದೆಹಲಿ ಭೇಟಿ ನಂತರ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆ. ಆಗ ನಾನು ಸಚಿವನಾಗುವುದು ಪಕ್ಕಾ ಎಂದು ಹೇಳಿದ್ದಾರೆ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್. ಕೋಲಾರದ ಮಾಲೂರಿನ ಚಿಕ್ಕತಿರುಪತಿಯಲ್ಲಿ ಖಾಸಗಿ ನರ್ಸಿಂಗ್ ಹೋಂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಟಿಬಿ ನಾಗರಾಜ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, "ಮುಂದಿನ ವಾರ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಅಲ್ಲಿಂದ ವಾಪಸ್ಸಾದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆ. ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ಕೊಡುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ" ಎಂದರು.

ಡ್ರಗ್ಸ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಎಂಟಿಬಿ, ಮೈತ್ರಿ ಸರ್ಕಾರ ಇದ್ದಾಗ ಡ್ರಗ್ಸ್ ಅಕ್ರಮವನ್ನು ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಆರೋಪ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಲೇವಡಿ ಮಾಡಿದರು. ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತು ಕ್ರಮ